7ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು ಅವುಗಳ ಉಪ ನಗರಗಳ ಸಂಗಡ ನಾಲ್ವತ್ತೆಂಟು ಪಟ್ಟಣಗಳಾಗಿರಬೇಕು.
8ನೀವು ಇಸ್ರಾಯೇಲ್ ಮಕ್ಕಳ ಸ್ವಾಸ್ತ್ಯದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ ತಕ್ಕೊಳ್ಳಬೇಕು; ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತಕ್ಕೊಳ್ಳಬೇಕು; ಒಬ್ಬೊಬ್ಬನು ತಾನು ಹೊಂದುವ ಸ್ವಾಸ್ತ್ಯಕ್ಕನುಸಾರವಾಗಿ ತನ್ನ ಪಟ್ಟಣ ಗಳೊಳಗಿಂದ ಲೇವಿಯರಿಗೆ ಕೊಡಬೇಕು ಎಂದು ಹೇಳಿದನು.
9ಕರ್ತನು ಮೋಶೆಯ ಸಂಗಡ ಮಾತನಾಡಿ--
10ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
11ಕೈತಪ್ಪಿ ಒಬ್ಬನನ್ನು ಕೊಂದ ಯಾವನಾದರೂ ಅಲ್ಲಿಗೆ ಓಡಿ ಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.