ಗಣನೆ 4

ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.

Numbers 4:7 (UKJV) And upon the table of showbread they shall spread a cloth of blue, and put thereon the dishes, and the spoons, and the bowls, and covers to cover likewise: and the continual bread shall be thereon:

5ಪಾಳೆಯವು ಹೊರಡು ವಾಗ ಆರೋನನೂ ಅವನ ಮಕ್ಕಳೂ ಒಳಗೆ ಹೋಗಿ ತೆರೆಯನ್ನು ಇಳಿಸಿ ಅದರಿಂದ ಸಾಕ್ಷಿಯ ಮಂಜೂಷವನ್ನು ಮುಚ್ಚಿ

6ಅದರ ಮೇಲೆ ಕಡಲು ಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗ ದಲ್ಲಿ ಪೂರ್ಣವಾದ ನೀಲಿ ವಸ್ತ್ರವನ್ನು ಹಾಸಿ ಅದರ ಕೋಲುಗಳನ್ನು ಇಡಬೇಕು.

7ಸಮ್ಮುಖದ ರೊಟ್ಚಿಯ ಮೇಜಿನ ಮೇಲೆ ಅವರು ನೀಲಿ ವಸ್ತ್ರವನ್ನು ಹಾಸಿ ಅದರ ಮೇಲೆ ಪಾತ್ರೆ ಚಮಟಿಕೆ ಪಾನದ ಅರ್ಪ ಣೆಯ ಹೂಜಿ ಇವುಗಳನ್ನು ಇಡಬೇಕು. ನಿತ್ಯವಾದ ರೊಟ್ಟಿಯೂ ಅದರ ಮೇಲೆ ಇರಬೇಕು.

8ಅವೆ ಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ ಅದನ್ನು ಕಡಲು ಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ ಅದರ ಕೋಲುಗಳನ್ನು ಇಡಬೇಕು.

9ಇದ ಲ್ಲದೆ ಅವರು ನೀಲಿ ವಸ್ತ್ರವನ್ನು ತಕ್ಕೊಂಡು ಅದರಿಂದ ದೀಪಸ್ತಂಭವನ್ನೂ ಅದರ ದೀಪಗಳನ್ನೂ ಚಮಟಿಕೆಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.

Kannada Bible (Old Version), Bible Society of India.