ಫಿಲೇಮೋನ್ 1

ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

Philemon 1:3 (UKJV) Grace to you, and peace, from God our Father and the Lord Jesus Christ.

1ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ

2ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--

3ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

4ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

5ಕರ್ತನಾದ ಯೇಸುವಿನ ಮೇಲೆಯೂ ಪರಿಶುದ್ಧರೆಲ್ಲರ ಮೇಲೆಯೂ ನಿನಗಿರುವ ಪ್ರೀತಿಯನೂ ನಂಬಿಕೆಯನ್ನೂ ಕುರಿತು ಕೇಳಿದ್ದೇನೆ.

Kannada Bible (Old Version), Bible Society of India.