ಫಿಲಿಪ್ಪಿ 2

ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.

Philippians 2:24 (UKJV) But I trust in the Lord that I also myself shall come shortly.

22ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.

23ಆದದರಿಂದ ನನ್ನ ಸಂಗತಿಯು ಹೇಗಾಗುವದೋ ಅದನ್ನು ತಿಳಿದ ಕೂಡಲೆ ಅವನನ್ನು ಕಳುಹಿಸುವದಕ್ಕೆ ನಿರೀಕ್ಷಿಸುತ್ತೇನೆ.

24ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.

25ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.

26ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.

Kannada Bible (Old Version), Bible Society of India.