ಫಿಲಿಪ್ಪಿ 4

ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್‌.

Philippians 4:20 (UKJV) Now unto God and our Father be glory for ever and ever. Amen.

18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ

19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್‌.

21ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬ ಪರಿಶುದ್ಧನಿಗೆ ವಂದನೆ. ನನ್ನ ಜೊತೆಯಲ್ಲಿರುವ ಸಹೋದರರು ನಿಮ್ಮನ್ನು ವಂದಿಸುತ್ತಾರೆ.

22ಪರಿಶುದ್ದರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಮುಖ್ಯವಾಗಿ ಕೈಸರನ ಮನೆಯವರು ನಿಮ್ಮನ್ನು ವಂದಿಸುತ್ತಾರೆ;

Kannada Bible (Old Version), Bible Society of India.