ನೀತಿಶಾಸ್ತ್ರ 14

ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.

Proverbs 14:1 (UKJV) Every wise woman builds her house: but the foolish plucks it down with her hands.

1ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.

2ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.

3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.

Kannada Bible (Old Version), Bible Society of India.