ನೀತಿಶಾಸ್ತ್ರ 14

ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.

Proverbs 14:2 (UKJV) He that walks in his uprightness fears the LORD: but he that is perverse in his ways despises him.

1ಜ್ಞಾನಿಯಾದ ಪ್ರತಿ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.

2ತನ್ನ ಯಥಾರ್ಥತೆಯಲ್ಲಿ ನಡೆಯುವವನು ಕರ್ತನಿಗೆ ಭಯಪಡುತ್ತಾನೆ; ತನ್ನ ಮಾರ್ಗಗಳಲ್ಲಿ ವಕ್ರತೆಯುಳ್ಳವನು ಆತನನ್ನು ಅಸಡ್ಡೆಮಾಡುತ್ತಾನೆ.

3ಬುದ್ಧಿಹೀನನ ಬಾಯಿ ಯಲ್ಲಿ ಗರ್ವದ ಅಂಕುರವಿದೆ; ಜ್ಞಾನವಂತರ ತುಟಿಗಳು ಅವುಗಳನ್ನು ಕಾಯುವವು.

4ಎತ್ತುಗಳು ಇಲ್ಲದೆ ಇರು ವಲ್ಲಿ ಗೋದಲಿಯು ಶುದ್ಧಿಯಾಗಿದೆ; ಎತ್ತಿನ ಬಲದಿಂದ ಬಹಳ ವೃದ್ಧಿಯು ಉಂಟಾಗುತ್ತದೆ.

Kannada Bible (Old Version), Bible Society of India.