12ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು.
13ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ.
14ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
15ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.
16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?