7ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣ ವನ್ನು ಪ್ರೀತಿಸುತ್ತಾನೆ; ವಿವೇಕವನ್ನು ಕೈಕೊಳ್ಳುವವನು ಒಳ್ಳೇದನ್ನು ಕಂಡುಕೊಳ್ಳುವನು.
9ಸುಳ್ಳು ಸಾಕ್ಷಿಯು ಶಿಕ್ಷಿಸಲ್ಪಡದೆ ಇರುವದಿಲ್ಲ; ಸುಳ್ಳಾಡುವವನು ನಾಶವಾ ಗುವನು.
10ಬುದ್ಧಿಹೀನನಿಗೆ ಆನಂದವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವದು ಸೇವಕ ನಿಗೆ ಯುಕ್ತವೇ ಅಲ್ಲ.
11ಮನುಷ್ಯನ ವಿವೇಕವು ಅವನ ಕೋಪವನ್ನು ಅಡ್ಡಿಮಾಡುತ್ತದೆ. ದೋಷವನ್ನು ಲಕ್ಷಿ ಸದೆ ಇರುವದು ಅವನಿಗೆ ಘನತೆಯಾಗಿದೆ.