ನೀತಿಶಾಸ್ತ್ರ 21

ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.

Proverbs 21:26 (UKJV) He covers greedily all the day long: but the righteous gives and spares not.

24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.

25ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ.

26ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.

27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.

28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.

Kannada Bible (Old Version), Bible Society of India.