ನೀತಿಶಾಸ್ತ್ರ 24

ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.

Proverbs 24:16 (UKJV) For a just man falls seven times, and rises up again: but the wicked shall fall into mischief.

14ಹೀಗೆ ನಿನ್ನ ಪ್ರಾಣಕ್ಕೆ ಜ್ಞಾನದ ತಿಳುವಳಿಕೆಯು ಇರುವದು; ಅದು ಸಿಕ್ಕಿದಾಗ ಬಹುಮಾನವಿರುವದು; ನಿನ್ನ ನಿರೀಕ್ಷೆಯು ನಿರರ್ಥಕವಾಗುವದಿಲ್ಲ.

15ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚುಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ;

16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.

17ನಿನ್ನ ಶತ್ರು ಬಿದ್ದರೆ ಸಂತೋಷಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ;

18ಕರ್ತನು ಅದನ್ನು ನೋಡಿದಾಗ ಅದು ಆತನಿಗೆ ಇಷ್ಟವಿಲ್ಲದ್ದರಿಂದ ಆತನು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಾನು.

Kannada Bible (Old Version), Bible Society of India.