ನೀತಿಶಾಸ್ತ್ರ 24

ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.

Proverbs 24:29 (UKJV) Say not, I will do so to him as he has done to me: I will render to the man according to his work.

27ಹೊರಗೆ ನಿನ್ನ ಕೆಲಸ ವನ್ನು ಸಿದ್ಧಪಡಿಸಿಕೊ; ಅದು ಹೊಲದಲ್ಲಿ ನಿನಗೋಸ್ಕರ ಸರಿಯಾಗುವಂತೆ ಮಾಡಿಕೊ; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.

28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ತುಟಿಗಳಿಂದ ಮೋಸಮಾಡಬೇಡ.

29ನನಗೆ ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿ ತೀರಿಸುವೆನು ಎಂದು ಹೇಳಬೇಡ.

30ಸೋಮಾರಿಯ ಹೊಲದ ಪಕ್ಕದಲ್ಲಿಯೂ ಬುದ್ಧಿ ಹೀನನ ದ್ರಾಕ್ಷೇ ತೋಟದ ಕಡೆಯಲ್ಲಿಯೂ ನಾನು ಹಾದು ಹೋದೆನು;

31ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಯಿತು.

Kannada Bible (Old Version), Bible Society of India.