10ಎಲ್ಲವು ಗಳನ್ನು ನಿರ್ಮಿಸಿದ ಮಹಾ ದೇವರು ತಾನೇ ಮೂಢ ನಿಗೂ ಅಪರಾಧಿಗಳಿಗೂ ಪ್ರತಿಫಲ ಕೊಡುತ್ತಾನೆ.
11ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ನೋಡಿ ದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ,
13ಸೋಮಾರಿಯು --ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಸಿಂಹ ಇದೆ ಎಂದು ಹೇಳುತ್ತಾನೆ.
14ಬಾಗಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ತಿರುಗುತ್ತಾನೆ.