11 ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಒಂದು ದಿನವು ಯಾವದನ್ನು ಸಂಭವಿಸುವಂತೆ ಮಾಡುತ್ತದೋ ಅದು ನಿನಗೆ ತಿಳಿ ಯದು.
2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
5ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.