ನೀತಿಶಾಸ್ತ್ರ 28

ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.

Proverbs 28:14 (UKJV) Happy is the man that fears always: but he that hardens his heart shall fall into mischief.

12ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.

13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.

14ಯಾವಾಗಲೂ ಭಯದಿಂದ ಇರು ವವನು ಧನ್ಯನು; ತನ್ನ ಹೃದಯವನ್ನು ಕಠಿಣಪಡಿಸಿ ಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.

15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ ಬಡವರಾದ ಜನರನ್ನು ಆಳುವ ದುಷ್ಟನು ಇರುತ್ತಾನೆ.

16ವಿವೇಕ ಶೂನ್ಯನಾದ ಒಡೆಯನು ಮಹಾಹಿಂಸಕನು; ಲೋಭತನವನ್ನು ಹಗೆಮಾಡುವವನು ತನ್ನ ದಿನಗಳನ್ನು ದೀರ್ಘಮಾಡುತ್ತಾನೆ.

Kannada Bible (Old Version), Bible Society of India.