ನೀತಿಶಾಸ್ತ್ರ 29

ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

Proverbs 29:16 (UKJV) When the wicked are multiplied, transgression increases: but the righteous shall see their fall.

14ಬಡವರಿಗೆ ನಂಬಿಕೆಯಿಂದ ನ್ಯಾಯತೀರಿಸುವ ಅರಸನ ಸಿಂಹಾ ಸನವು ಎಂದೆಂದಿಗೂ ಸ್ಥಿರಗೊಳ್ಳುವದು.

15ಬೆತ್ತ ಬೆದ ರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.

16ದುಷ್ಟರು ವೃದ್ಧಿಯಾದಾಗ ದೋಷವು ಹೆಚ್ಚುತ್ತದೆ; ನೀತಿವಂತರು ಅವರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.

17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.

18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.

Kannada Bible (Old Version), Bible Society of India.