17ನಿನ್ನ ಮಗನನ್ನು ಶಿಕ್ಷಿಸಿದರೆ ಅವ ನಿಂದ ನಿನಗೆ ನೆಮ್ಮದಿಯಾಗುವದು; ಹೌದು, ಅವನು ನಿನ್ನ ಪ್ರಾಣಕ್ಕೆ ಆನಂದವನ್ನುಂಟು ಮಾಡುವನು.
18ದರ್ಶನವಿಲ್ಲದಿರುವಲ್ಲಿ ಜನರು ನಾಶವಾಗುತ್ತಾರೆ; ನ್ಯಾಯಪ್ರಮಾಣವನ್ನು ಕೈಕೊಳ್ಳುವವನು ಧನ್ಯನು.
19ಮಾತುಗಳಿಂದ ಸೇವಕನು ಶಿಕ್ಷಿಸಲ್ಪಡುವದಿಲ್ಲ; ಅವನು ತಿಳಿದುಕೊಂಡರೂ ಉತ್ತರಿಸುವದಿಲ್ಲ.
20ತನ್ನ ಮಾತುಗಳಲ್ಲಿ ದುಡುಕುವವನನ್ನು ನೀನು ನೋಡಿದ್ದೀಯೋ? ಅವನಿಗಿಂತಲೂ ಬುದ್ದಿಹೀನನ ವಿಷಯ ದಲ್ಲಿ ಹೆಚ್ಚು ನಿರೀಕ್ಷೆ ಇದೆ.
21ಬಾಲ್ಯದಿಂದ ತನ್ನ ಸೇವಕನನ್ನು ಕೋಮಲವಾಗಿ ಸಾಕುವವನು ತರುವಾಯ ತನಗೆ ಮಗನಂತೆ ಆಗುವನು.