22ಅವು ನಿನ್ನ ಪ್ರಾಣಕ್ಕೆ ಜೀವವೂ ಕೊರ ಳಿಗೆ ಸೊಬಗೂ ಆಗಿರುವವು.
23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.
24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.
25ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.
26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.