ನೀತಿಶಾಸ್ತ್ರ 3

ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.

Proverbs 3:25 (UKJV) Be not afraid of sudden fear, neither of the desolation of the wicked, when it comes.

23ನಿನ್ನ ಮಾರ್ಗದಲ್ಲಿ ನೀನು ನಿರ್ಭಯವಾಗಿ ನಡೆಯುವಿ, ನಿನ್ನ ಪಾದವು ಎಡವುವದಿಲ್ಲ.

24ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು.

25ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು.

26ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.

27ನಿನಗೆ ಸಾಧ್ಯವಿರುವಾಗ ಹೊಂದತಕ್ಕವರಿಗೆ ಒಳ್ಳೆ ಯದು ಮಾಡುವದನ್ನು ತಪ್ಪಿಸಬೇಡ.

Kannada Bible (Old Version), Bible Society of India.