ನೀತಿಶಾಸ್ತ್ರ 31

ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.

Proverbs 31:17 (UKJV) She girds her loins with strength, and strengthens her arms.

15ಆಕೆಯು ಇನ್ನೂ ಕತ್ತಲಿರುವಾಗಲೇ ಎದ್ದು ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು ತನ್ನ ದಾಸಿಯರಿಗೆ ಭತ್ಯವನ್ನು ಹಂಚುತ್ತಾಳೆ.

16ಆಕೆಯು ಯೋಚಿಸಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ತನ್ನ ಕೈಕೆಲಸದ ಫಲದಿಂದ ಆಕೆಯು ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.

17ಆಕೆಯು ತನ್ನ ಬಲದಿಂದ ನಡುವನ್ನು ಕಟ್ಟಿಕೊಂಡು ತನ್ನ ತೋಳುಗಳನ್ನು ಶಕ್ತಿಗೊಳಿಸುತ್ತಾಳೆ.

18ತನ್ನ ವ್ಯಾಪಾರದ ಸರಕು ಒಳ್ಳೇದೆಂದು ಆಕೆಯು ತಿಳು ಕೊಳ್ಳುತ್ತಾಳೆ; ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.

19ರಾಟೆಯ ಮೇಲೆ ಕೈಹಾಕಿ ತನ್ನ ಕೈಗಳು ಕದರನ್ನು ಹಿಡಿಯುತ್ತವೆ.

Kannada Bible (Old Version), Bible Society of India.