26ಆಕೆಯು ಜ್ಞಾನದಿಂದ ತನ್ನ ಬಾಯಿ ತೆರೆಯುತ್ತಾಳೆ; ತನ್ನ ನಾಲಿಗೆಯಲ್ಲಿ ದಯೆಯ ಉಪದೇಶವಿರುವದು.
27ಆಕೆಯು ತನ್ನ ಗೃಹಕೃತ್ಯಗಳ ನ್ನೆಲ್ಲಾ ಚೆನ್ನಾಗಿ ನೋಡಿಕೊಂಡವಳಾಗಿ ಸೋಮಾರಿ ತನದ ರೊಟ್ಟಿಯನ್ನು ತಿನ್ನುವದಿಲ್ಲ.
28ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ.
29ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.
30ಸೌಂದ ರ್ಯವು ಮೋಸಕರ; ಲಾವಣ್ಯವು ವ್ಯರ್ಥ; ಕರ್ತನಿಗೆ ಭಯಪಡುವವಳು ಹೊಗಳಲ್ಪಡುವಳು.