ನೀತಿಶಾಸ್ತ್ರ 4

ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.

Proverbs 4:10 (UKJV) Hear, O my son, and receive my sayings; and the years of your life shall be many.

8ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.

9ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.

10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.

11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.

12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.

Kannada Bible (Old Version), Bible Society of India.