ನೀತಿಶಾಸ್ತ್ರ 4

ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.

Proverbs 4:11 (UKJV) I have taught you in the way of wisdom; I have led you in right paths.

9ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.

10ಓ ನನ್ನ ಮಗನೇ, ಆಲಿಸಿ ನನ್ನ ಮಾತುಗಳನ್ನು ಅಂಗೀಕರಿಸು; ಆಗ ನಿನ್ನ ಜೀವಿತದ ವರುಷಗಳು ಹೆಚ್ಚಾಗುವವು.

11ಜ್ಞಾನದ ಮಾರ್ಗದಲ್ಲಿ ನಾನು ನಿನಗೆ ಬೋಧಿಸಿದೆನು; ಸರಿಯಾದ ದಾರಿಗಳಲ್ಲಿ ನಾನು ನಿನ್ನನ್ನು ನಡಿಸಿದೆನು.

12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ಇಕ್ಕಟ್ಟಾಗದು; ನೀನು ಓಡುವಾಗ ಮುಗ್ಗರಿಸುವದಿಲ್ಲ.

13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.

Kannada Bible (Old Version), Bible Society of India.