21ಅವುಗಳನ್ನು ಯಾವಾಗಲೂ ನಿನ್ನ ಹೃದಯಕ್ಕೆ ಬಂಧಿಸು. ನಿನ್ನ ಕಂಠಕ್ಕೆ ಕಟ್ಟಿಕೋ.
22ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
24ಕೆಟ್ಟ ಹೆಂಗಸಿನಿಂದಲೂ ಪರ ಸ್ತ್ರೀಯ ನಾಲಿಗೆಯ ಮುಖಸ್ತುತಿಯಿಂದಲೂ ಅವು ನಿನ್ನನ್ನು ಕಾಪಾಡುವವು.
25ನಿನ್ನ ಹೃದಯದಲ್ಲಿ ಅವಳ ಸೌಂದರ್ಯವನ್ನು ಮೋಹಿಸಬೇಡ; ಇದಲ್ಲದೆ ಅವಳ ಕಣ್ಣುರೆಪ್ಪೆಗಳಿಂದ ನಿನ್ನನ್ನು ಅವಳು ವಶಮಾಡಿಕೊಳ್ಳದೆ ಇರಲಿ.