ಸ್ತುತಿಗಳು 1

ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

Psalm 1:3 (UKJV) And he shall be like a tree planted by the rivers of water, that brings forth his fruit in his season; his leaf also shall not wither; and whatsoever he does shall prosper.

1ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ

2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.

3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

4ಭಕ್ತಿಹೀನರು ಹಾಗಲ್ಲ, ಅವರು ಗಾಳಿ ಬಡು ಕೊಂಡು ಹೋಗುವ ಹೊಟ್ಟಿನ ಹಾಗೆ ಇದ್ದಾರೆ.

5ಆದದರಿಂದ ಭಕ್ತಿಹೀನರು ನ್ಯಾಯತೀರ್ಪಿನಲ್ಲಿಯೂ ಪಾಪಿಗಳು ನೀತಿವಂತರ ಸಭೆಯಲ್ಲಿಯೂ ನಿಲ್ಲರು.

Kannada Bible (Old Version), Bible Society of India.