ಸ್ತುತಿಗಳು 10

ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.

Psalm 10:2 (UKJV) The wicked in his pride does persecute the poor: let them be taken in the devices that they have imagined.

1ಓ ಕರ್ತನೇ, ನೀನು ದೂರದಲ್ಲಿ ನಿಂತು ಕೊಳ್ಳುವದೂ ಕಷ್ಟಕಾಲಗಳಲ್ಲಿ ನಿನ್ನನ್ನು ಮರೆಮಾಡಿಕೊಳ್ಳುವದೂ ಯಾಕೆ?

2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.

3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.

4ದುಷ್ಟನು ತನ್ನ ಗರ್ವದ ಮುಖದಿಂದ ದೇವರನ್ನು ಹುಡುಕುವದಿಲ್ಲ; ಅವನ ಯೋಚನೆಗಳೆಲ್ಲಾ ದೇವ ರಿಲ್ಲದವುಗಳು.

Kannada Bible (Old Version), Bible Society of India.