ಸ್ತುತಿಗಳು 102

ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.

Psalm 102:4 (UKJV) My heart is smitten, and withered like grass; so that I forget to eat my bread.

2ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ನಾನು ಕರೆಯುವ ದಿವಸದಲ್ಲಿ ಬೇಗ ನನಗೆ ಉತ್ತರ ಕೊಡು.

3ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗು ತ್ತವೆ; ನನ್ನ ಎಲುಬುಗಳು ಕೊಳ್ಳಿಯ ಹಾಗೆ ಸುಟ್ಟು ಹೋಗಿವೆ.

4ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.

5ನನ್ನ ಮೂಲುಗುವಿಕೆಯ ಸ್ವರದಿಂದ ಎಲುಬುಗಳು ನನ್ನ ಮಾಂಸಕ್ಕೆ ಅಂಟುತ್ತವೆ.

6ನಾನು ಅರಣ್ಯದ ಬಕಕ್ಕೆ ಸಮಾನನಾಗಿದ್ದೇನೆ; ನಾನು ಅರಣ್ಯದ ಗೂಬೆಯ ಹಾಗಿದ್ದೇನೆ.

Kannada Bible (Old Version), Bible Society of India.