ಸ್ತುತಿಗಳು 104

ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.

Psalm 104:13 (UKJV) He waters the hills from his chambers: the earth is satisfied with the fruit of your works.

11ಕಾಡಿನ ಮೃಗಗಳಿಗೆಲ್ಲಾ ಅವು ನೀರು ಕುಡಿಸುತ್ತವೆ; ಕಾಡು ಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.

12ಆಕಾಶದ ಪಕ್ಷಿಗಳು ಅವುಗಳ ಹತ್ತಿರ ವಾಸವಾಗಿದ್ದು ಕೊಂಬೆಗಳ ಮಧ್ಯ ದಲ್ಲಿಂದ ಹಾಡುತ್ತವೆ.

13ಬೆಟ್ಟಗಳಿಗೆ ತನ್ನ ಉಪ್ಪರಿಗೆ ಗಳೊಳಗಿಂದ ನೀರು ಹಾಕುತ್ತಾನೆ; ತನ್ನ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.

14ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.

15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

Kannada Bible (Old Version), Bible Society of India.