12ಅವನಿಗೆ ಕರುಣೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ಇಲ್ಲವೆ ದಿಕ್ಕಿಲ್ಲದ ಅವನ ಮಕ್ಕಳನ್ನು ಕರುಣಿಸುವವನು ಯಾವನೂ ಇಲ್ಲದೆ ಇರಲಿ.
13ಅವನ ಸಂತಾನವು ನಿರ್ನಾಮವಾಗಲಿ; ಎರಡನೇ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.
14ಅವನ ತಂದೆಗಳ ಅಕ್ರಮವು ಕರ್ತನ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.
15ಅವು ಯಾವಾಗಲೂ ಕರ್ತನ ಮುಂದೆ ಇರಲಿ; ಆತನು ಅವನ ಜ್ಞಾಪಕವನ್ನು ಭೂಮಿಯೊಳಗಿಂದ ಕಡಿದುಬಿಡಲಿ.
16ಅವನು ಕರುಣೆ ತೋರಿಸುವದನ್ನು ಮರೆತು ಹೃದಯದಲ್ಲಿ ನೊಂದವ ರನ್ನು ಕೊಲ್ಲುವದಕ್ಕೂ ಬಡವನನ್ನೂ ಕೊರತೆಯುಳ್ಳ ವವನ್ನೂ ಹಿಂಸಿಸಿದನು.