4ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಕರ್ತನ ಸಿಂಹಾಸನವು ಪರಲೋಕದಲ್ಲಿ ಅದೆ; ಆತನ ಕಣ್ಣುಗಳು ದೃಷ್ಟಿಸುತ್ತವೆ; ಆತನ ರೆಪ್ಪೆಗಳು ಮನು ಷ್ಯನ ಮಕ್ಕಳನ್ನು ಶೋಧಿಸುತ್ತವೆ;
5ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.
6ದುಷ್ಟರ ಮೇಲೆ ಉರ್ಲುಗಳನ್ನೂ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಆತನು ಸುರಿಸುವನು. ಇದು ಅವರ ಪಾನದ ಬಟ್ಟ ಲಾಗಿರುವದು;
7ನೀತಿಯ ಕರ್ತನು ನೀತಿಯನ್ನು ಪ್ರೀತಿ ಮಾಡುತ್ತಾನೆ; ಆತನ ಮುಖವು ಯಥಾರ್ಥನನ್ನು ದೃಷ್ಟಿಸುತ್ತದೆ.