ಸ್ತುತಿಗಳು 111

ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.

Psalm 111:2 (UKJV) The works of the LORD are great, sought out of all them that have pleasure therein.

1ಕರ್ತನನ್ನು ಸ್ತುತಿಸಿರಿ; ನಾನು ಕರ್ತನನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ ಸಭೆಯಲ್ಲಿಯೂ ಕೊಂಡಾಡುವೆನು.

2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.

3ಆತನ ಕೆಲಸವು ಪ್ರಭೆಯೂ ಮಹಿಮೆಯೂ ಉಳ್ಳದ್ದು; ಆತನ ನೀತಿಯು ಎಂದೆಂದಿಗೂ ನಿಲ್ಲುತ್ತದೆ.

4ಆತನು ತನ್ನ ಅದ್ಭುತಗಳನ್ನು ಕುರಿತು ಜ್ಞಾಪಕಮಾಡಿದ್ದಾನೆ; ಕರ್ತನು ಕೃಪಾಳುವೂ ಅಂತಃ ಕರಣವೂ ಉಳ್ಳಾತನೇ.

Kannada Bible (Old Version), Bible Society of India.