12ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು.
13ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು.
14ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.
15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.