ಸ್ತುತಿಗಳು 119

ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.

Psalm 119:99 (UKJV) I have more understanding than all my teachers: for your testimonies are my meditation.

97ನಿನ್ನ ನ್ಯಾಯಪ್ರಮಾಣವನ್ನು ನಾನು ಎಷ್ಟೋ ಪ್ರೀತಿ ಮಾಡುತ್ತೇನೆ, ದಿನವೆಲ್ಲಾ ಅದೇ ನನ್ನ ಧ್ಯಾನವು.

98ನಿನ್ನ ಆಜ್ಞೆಗಳ ಮೂಲಕ ನನ್ನ ಶತ್ರುಗಳಿಗಿಂತ ನನ್ನನ್ನು ಜ್ಞಾನಿಯಾಗಿ ಮಾಡಿದ್ದೀ; ಅವು ಎಂದೆಂದಿಗೂ ನನ್ನಲ್ಲಿ ಅವೆ.

99ನನ್ನ ಬೋಧಕರೆಲ್ಲರಿಗಿಂತ ನಾನು ಬುದ್ಧಿವಂತ ನಾಗಿದ್ದೇನೆ; ನಿನ್ನ ಸಾಕ್ಷಿಗಳು ನನ್ನ ಧ್ಯಾನವಾಗಿವೆ.

100ನಾನು ಪೂರ್ವಿಕರಿಗಿಂತ ವಿವೇಕಿಯಾಗಿದ್ದೇನೆ; ನಿನ್ನ ಕಟ್ಟಳೆಗಳನ್ನು ಕೈಕೊಂಡಿದ್ದೇನೆ.

101ನಿನ್ನ ವಾಕ್ಯವನ್ನು ಕೈಕೊಳ್ಳುವ ಹಾಗೆ ಎಲ್ಲಾ ಕೆಟ್ಟದಾರಿಗಳಿಂದ ನನ್ನ ಪಾದ ಗಳನ್ನು ಹಿಂದೆಗೆದ್ದಿದ್ದೇನೆ.

Kannada Bible (Old Version), Bible Society of India.