1ಕರ್ತನೇ, ಸಹಾಯಮಾಡು; ಯಾಕಂದರೆ ಭಕ್ತನು ಮುಗಿದು ಹೋಗುತ್ತಾನೆ; ನಂಬಿಗಸ್ತರು ಮನುಷ್ಯನ ಮಕ್ಕಳೊಳಗಿಂದ ಇಲ್ಲದೆ ಹೋಗುತ್ತಾರೆ.
2ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
3ಮುಖಸ್ತುತಿಯ ಎಲ್ಲಾ ತುಟಿಗಳನ್ನೂ ಗರ್ವದಿಂದ ಮಾತನಾಡುವ ನಾಲಿಗೆಯನ್ನೂ ಕರ್ತನು ಕಡಿದು ಬಿಡುವನು.