10ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ ಕುಣಿಯಲ್ಲಿಯೂ ಆತನು ಅವರನ್ನು ಕೆಡವಲಿ.
11ಕೆಟ್ಟದ್ದನ್ನು ಮಾತನಾಡುವವನು ಭೂಮಿ ಯಲ್ಲಿ ಸ್ಥಿರವಾಗದಿರಲಿ; ಬಲಾತ್ಕಾರಿಯನ್ನು ಕೆಡವು ವದಕ್ಕೆ ಕೇಡು ಅವನನ್ನು ಬೇಟೆಯಾಡುವದು.
12ಕರ್ತನು ದೀನನಿಗೆ ವ್ಯಾಜ್ಯವನ್ನೂ ಬಡವರಿಗೆ ನ್ಯಾಯವನ್ನೂ ತೀರಿಸುವನೆಂದು ನಾನು ಬಲ್ಲೆನು.
13ನಿಶ್ಚಯವಾಗಿ ನೀತಿವಂತರು ನಿನ್ನ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿನ್ನ ಸನ್ನಿಧಿಯಲ್ಲಿ ವಾಸಿಸುವರು.