3ಕರ್ತನೇ, ನೀನು ಮನುಷ್ಯನನ್ನು ತಿಳುಕೊಳ್ಳುವ ಹಾಗೆ ಅವನು ಎಷ್ಟರವನು? ನೀನು ಅವನನ್ನು ಲಕ್ಷಿಸುವ ಹಾಗೆ ನರಪುತ್ರನು ಎಷ್ಟರವನು?
4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
5ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು.
6ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು.
7ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು.