ಸ್ತುತಿಗಳು 149

ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.

Psalm 149:4 (UKJV) For the LORD takes pleasure in his people: he will beautify the meek with salvation.

2ಇಸ್ರಾಯೇಲು ತನ್ನನ್ನು ಉಂಟುಮಾಡಿದಾತನಲ್ಲಿ ಸಂತೋಷಿಸಲಿ; ಚೀಯೋನಿನ ಮಕ್ಕಳು ತಮ್ಮ ಅರಸನಲ್ಲಿ ಉಲ್ಲಾಸಿಸಲಿ.

3ಆತನ ಹೆಸರನ್ನು ಕುಣಿಯುತ್ತಾ ಸ್ತುತಿಸಲಿ; ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಆತನನ್ನು ಕೀರ್ತಿಸಲಿ.

4ಕರ್ತನು ತನ್ನ ಜನರಲ್ಲಿ ಇಷ್ಟಪಡುತ್ತಾನೆ; ದೀನರನ್ನು ರಕ್ಷಣೆಯಿಂದ ಅಲಂಕರಿಸುತ್ತಾನೆ.

5ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.

6ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.

Kannada Bible (Old Version), Bible Society of India.