ಸ್ತುತಿಗಳು 18

ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.

Psalm 18:14 (UKJV) Yea, he sent out his arrows, and scattered them; and he shot out lightnings, and humiliated them.

12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.

13ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು

14ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.

15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.

16ಆತನು ಮೇಲಿನಿಂದ ಕಳುಹಿಸಿ ನನ್ನನ್ನು ಹಿಡಿದು ಬಹಳ ನೀರುಗಳೊಳಗಿಂದ ಎಳೆದನು.

Kannada Bible (Old Version), Bible Society of India.