11 ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
2ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ.
3ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ.
4ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.