4ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ.
5ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ.
6ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.