7ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
8ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ.
9ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
10ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು.
11ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.