ಸ್ತುತಿಗಳು 22

ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.

Psalm 22:6 (UKJV) But I am a worm, and no man; a reproach of men, and despised of the people.

4ನಿನ್ನಲ್ಲಿ ನಮ್ಮ ಪಿತೃಗಳು ಭರವಸವಿಟ್ಟರು; ಅವರು ಭರವಸವಿಟ್ಟದ್ದರಿಂದ ನೀನು ಅವರನ್ನು ತಪ್ಪಿ ಸಿದಿ.

5ನಿನಗೆ ಅವರು ಮೊರೆ ಇಟ್ಟದ್ದರಿಂದ ತಪ್ಪಿಸ ಲ್ಪಟ್ಟರು; ನಿನ್ನಲ್ಲಿ ಭರವಸವಿಟ್ಟದ್ದರಿಂದ ಅವರು ನಾಚಿಕೆ ಪಡಲಿಲ್ಲ.

6ನಾನು ಹುಳವೇ, ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟವನೂ ಜನರಿಂದ ತಿರಸ್ಕರಿಸಲ್ಪಟ್ಟವನೂ ಆಗಿದ್ದೇನೆ.

7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--

8ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.

Kannada Bible (Old Version), Bible Society of India.