1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
2ಆತನು ಅದನ್ನು ಸಮುದ್ರಗಳ ಮೇಲೆ ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರ ಪಡಿಸಿದ್ದಾನೆ.
3ಕರ್ತನ ಪರ್ವತವನ್ನು ಹತ್ತುವವನು ಯಾರು? ಇಲ್ಲವೆ ಆತನ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?
4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.