1ಓ ಕರ್ತನೇ, ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
2ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
3ನಿನ್ನನ್ನು ನಿರೀಕ್ಷಿಸು ವವರಲ್ಲಿ ಯಾರೂ ಆಶಾಭಂಗಪಡದಿರಲಿ; ನಿಷ್ಕಾರಣ ವಾಗಿ ದ್ರೋಹ ಮಾಡುವವರು ನಾಚಿಕೆಗೊಳ್ಳಲಿ.
4ಓ ಕರ್ತನೇ, ನಿನ್ನ ಮಾರ್ಗಗಳನ್ನು ನನಗೆ ತೋರಿ ಸು; ನಿನ್ನ ದಾರಿಗಳನ್ನು ನನಗೆ ಕಲಿಸು.
5ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.