9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
10ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.
11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.