ಸ್ತುತಿಗಳು 30

ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.

Psalm 30:3 (UKJV) O LORD, you have brought up my soul from the grave: you have kept me alive, that I should not go down to the pit.

11 ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.

2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.

3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.

4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

Kannada Bible (Old Version), Bible Society of India.