9ಆತನ ಪರಿ ಶುದ್ಧರೇ, ನೀವು ಕರ್ತನಿಗೆ ಭಯಪಡಿರಿ; ಆತನಿಗೆ ಭಯಪಡುವವರಿಗೆ ಏನೂ ಕೊರತೆ ಇಲ್ಲ.
10ಪ್ರಾಯದ ಸಿಂಹಗಳು ಕೊರತೆಯಾಗಿ ಹಸಿಯುತ್ತವೆ; ಆದರೆ ಕರ್ತನನ್ನು ಹುಡುಕುವವರು ಯಾವ ಒಳ್ಳೆಯ ದಕ್ಕಾದರೂ ಕೊರತೆ ಪಡುವದಿಲ್ಲ.
11ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
12ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?
13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.