11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
12ನನ್ನ ಪ್ರಾಣವನ್ನು ಕೆಡಿಸುವದಕ್ಕೆ ಮೇಲಿಗೆ ಬದಲಾಗಿ ಕೇಡನ್ನು ನನಗೆ ಮಾಡಿದರು.
13ನಾನಾ ದರೋ ಅವರು ಅಸ್ವಸ್ಥವಾದಾಗ, ಗೋಣೀ ತಟ್ಟು ಹೊದ್ದುಕೊಂಡು ನನ್ನ ಪ್ರಾಣವನ್ನು ಉಪವಾಸದಿಂದ ಕುಂದಿಸಿದೆನು; ನನ್ನ ಪ್ರಾರ್ಥನೆಯು ನನ್ನ ಎದೆಗೆ ತಿರುಗಿತು.
14ಅವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಆದ ಹಾಗೆ ನಡೆದುಕೊಂಡೆನು; ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವ ನಾಗಿ ಬೊಗ್ಗಿಕೊಂಡೆನು.
15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.