15ನನ್ನ ಆಪತ್ತಿನಲ್ಲಿ ಅವರು ಸಂತೋಷಪಟ್ಟು ಕೂಡಿಕೊಂಡರು; ಹೌದು, ನಾನರಿ ಯದ ದೂಷಕರು ನನಗೆ ವಿರೋಧವಾಗಿ ಕೂಡಿ ಕೊಂಡರು; ಸುಮ್ಮನಿರದೆ ನನ್ನನ್ನು ಸುಲುಕೊಂಡರು.
16ಔತಣಗಳಲ್ಲಿ ಗೇಲಿಮಾಡುವ ಕಪಟಿಗಳ ಸಂಗಡ ನನ್ನ ಮೇಲೆ ತಮ್ಮ ಹಲ್ಲುಗಳನ್ನು ಕಡಿಯುತ್ತಾರೆ.
17ಕರ್ತನೇ, ಎಷ್ಟರ ವರೆಗೆ ನೀನು ನೋಡುವಿ? ಅವರ ನಾಶನಗಳಿಂದಲೂ ಸಿಂಹಗಳಿಂದಲೂ ನನ್ನ ಪ್ರಿಯವಾದ ಪ್ರಾಣವನ್ನು ತಪ್ಪಿಸು.
18ಮಹಾಸಭೆ ಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರಲ್ಲಿ ನಿನ್ನನ್ನು ಸ್ತುತಿಸುವೆನು.
19ನನ್ನ ಶತ್ರುಗಳು ನನ್ನ ವಿಷ ಯದಲ್ಲಿ ಸುಳ್ಳಾಗಿ ಸಂತೋಷಪಡದೆ ಇರಲಿ; ಇಲ್ಲವೆ ನನ್ನನ್ನು ಕಾರಣವಿಲ್ಲದೆ ಹಗೆಮಾಡುವವರು ಕಣ್ಣು ಸನ್ನೆಮಾಡದೆ ಇರಲಿ.