4ಕುಯುಕ್ತಿಯನ್ನು ತನ್ನ ಹಾಸಿಗೆಯ ಮೇಲೆ ಕಲ್ಪಿಸುತ್ತಾನೆ; ಒಳ್ಳೇದಲ್ಲದ ಮಾರ್ಗದಲ್ಲಿ ನಿಂತು ಕೊಳ್ಳುತ್ತಾನೆ; ಕೆಟ್ಟದ್ದನ್ನು ಅಸಹ್ಯಿಸುವದಿಲ್ಲ.
5ಓ ಕರ್ತನೇ, ಆಕಾಶದಲ್ಲಿ ನಿನ್ನ ಕರುಣೆಯು ಅದೆ; ನಿನ್ನ ನಂಬಿಗಸ್ತಿಕೆಯು ಮೇಘಗಳ ವರೆಗೆ ಮುಟ್ಟಿದೆ.
6ನಿನ್ನ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿನ್ನ ನ್ಯಾಯತೀರ್ಪುಗಳು ಮಹಾ ಅಗಾಧವೇ. ಓ ಕರ್ತನೇ, ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀ.
7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
8ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ.